ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು
Choose an available translation of this Hadeeth
Hadeeth text
ಮಅದಾನ್ ಬಿನ್ ಅಬೂ ತಲ್ಹ ಯಅಮರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸ್ವತಂತ್ರಗೊಳಿಸಿದ ಗುಲಾಮನಾದ ಸೌಬಾನ್‌ರನ್ನು ಭೇಟಿಯಾಗಿ ಹೇಳಿದೆ: ನನಗೆ ಒಂದು ಕರ್ಮವನ್ನು ತಿಳಿಸಿಕೊಡಿ. ನಾನು ಅದನ್ನು ಮಾಡಿದರೆ ಅದರ ಮೂಲಕ ಅಲ್ಲಾಹು ನನ್ನನ್ನು ಸ್ವರ್ಗಕ್ಕೆ ಪ್ರವೇಶಗೊಳಿಸಬೇಕು. ಅಥವಾ ನಾನು ಹೀಗೆ ಹೇಳಿದೆ: ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮವನ್ನು ತಿಳಿಸಿಕೊಡಿ. ಅವರು ಮೌನವಾದರು. ನಾನು ಪುನಃ ಕೇಳಿದೆ. ಆದರೆ ಅವರು ಮೌನವಾದರು. ನಾನು ಮೂರನೇ ಬಾರಿ ಕೇಳಿದಾಗ ಅವರು ಹೇಳಿದರು: ನಾನು ಇದೇ ವಿಷಯವನ್ನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದ್ದೆ. ಆಗ ಅವರು ಹೀಗೆ ಉತ್ತರಿಸಿದರು: "ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು." ಮಅದಾನ್ ಹೇಳಿದರು: ನಂತರ ನಾನು ಅಬೂ ದರ್ದಾಅ್‌ರನ್ನು ಭೇಟಿಯಾಗಿ ಇದೇ ಪ್ರಶ್ನೆಯನ್ನು ಕೇಳಿದೆ. ಅವರು ಕೂಡ ಸೌಬಾನ್ ಹೇಳಿದಂತೆಯೇ ಹೇಳಿದರು.
Explanation
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಶ್ನೆ ಕೇಳಿದವನಿಗೆ ಹೀಗೆ ಉತ್ತರಿಸಿದರು: ಅಲ್ಲಾಹನಿಗೆ ಅತ್ಯಧಿಕ ಸುಜೂದ್ ಮಾಡುವ ಪರಿಪಾಠವನ್ನಿಟ್ಟುಕೋ. ಏಕೆಂದರೆ ನೀನು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿನಗೆ ಒಂದು ಸ್ಥಾನವನ್ನು ಏರಿಸುವನು ಮತ್ತು ನಿನ್ನ ಒಂದು ಪಾಪವನ್ನು ಕ್ಷಮಿಸುವನು."
Benefits
ಅಲ್ಲಾಹನ ಕರುಣೆಯನ್ನು ಬಿಟ್ಟರೆ, ಕರ್ಮಗಳ ಮೂಲಕವಲ್ಲದೆ ಸ್ವರ್ಗವನ್ನು ಗಳಿಸಲು ಸಾಧ್ಯವಿಲ್ಲ ಎಂದು ಸಹಾಬಿಗಳು ಅರ್ಥಮಾಡಿಕೊಂಡಿದ್ದರೆಂದು ವಿವರಿಸಲಾಗಿದೆ.
ನಮಾಝಿನಲ್ಲಿ ಸುಜೂದ್ ಮಾಡುವುದು ಸ್ಥಾನಮಾನಗಳು ಏರಲು ಮತ್ತು ಪಾಪಗಳು ಕ್ಷಮಿಸಲ್ಪಡಲು ಅತಿದೊಡ್ಡ ಕಾರಣವಾಗಿದೆ.
Attribution
Categories
Share hadeeth
Sharing options · 0 Total shares

