ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ
Choose an available translation of this Hadeeth
Hadeeth text
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದು ನಿನಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಜನರಿಗೆ ಈ ಸಿಹಿಸುದ್ದಿಯನ್ನು ತಿಳಿಸಲೇ?" ಅವರು ಉತ್ತರಿಸಿದರು: "ಬೇಡ, ಅವರಿಗೆ ಸಿಹಿ ಸುದ್ದಿ ತಿಳಿಸಬೇಡ. ಅವರು ಅದರ ಮೇಲೆ ಅವಲಂಬಿತರಾಗಬಹುದು."
Explanation
Benefits
ಅದೇ ರೀತಿ, ಅಲ್ಲಾಹು ತನ್ನ ಅನುಗ್ರಹ ಮತ್ತು ಔದಾರ್ಯದಿಂದ ಕಡ್ಡಾಯವಾಗಿ ನಿರ್ವಹಿಸುವ ದಾಸರ ಹಕ್ಕನ್ನು ಕೂಡ ಈ ಹದೀಸ್ ವಿವರಿಸುತ್ತದೆ. ಅದೇನೆಂದರೆ ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವುದು ಮತ್ತು ಅವರನ್ನು ಶಿಕ್ಷಿಸದಿರುವುದು.
ಅಲ್ಲಾಹನೊಂದಿಗೆ ಏನನ್ನೂ ಸಹಭಾಗಿಯನ್ನಾಗಿ ಮಾಡದ ಏಕದೇವ ವಿಶ್ವಾಸಿಗಳು ಸ್ವರ್ಗವನ್ನು ಪಡೆಯುತ್ತಾರೆ ಎಂಬ ಮಹಾ ಸುವಾರ್ತೆಯನ್ನು ಈ ಹದೀಸ್ ತಿಳಿಸುತ್ತದೆ.
ಜ್ಞಾನವನ್ನು ಬಚ್ಚಿಟ್ಟ ಪಾಪಕ್ಕೆ ಗುರಿಯಾಗದಿರಲು ನಿಧನರಾಗುವುದಕ್ಕೆ ಮುಂಚೆ ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಈ ಹದೀಸನ್ನು ಜನರಿಗೆ ತಿಳಿಸಿಕೊಟ್ಟರು.
ಕೆಲವು ರೀತಿಯ ಹದೀಸ್‌ಗಳನ್ನು ಅವುಗಳ ಅರ್ಥವನ್ನು ಸರಿಯಾಗಿ ಗ್ರಹಿಸಲಾಗದ ಕೆಲವೊಂದು ಜನರಿಗೆ ತಿಳಿಸಿಕೊಡಬಾರದು ಎಂದು ಈ ಹದೀಸ್ ಸೂಚಿಸುತ್ತದೆ. ಅಂದರೆ, ಕರ್ಮ ಮಾಡಬೇಕೆಂಬ ಆಜ್ಞೆಯಿಲ್ಲದ ಮತ್ತು ಧಾರ್ಮಿಕವಾದ ಯಾವುದೇ ಶಿಕ್ಷೆಯ ಬಗ್ಗೆ ಉಲ್ಲೇಖವಿರದ ಹದೀಸ್‌ಗಳು.
ಏಕದೇವ ವಿಶ್ವಾಸಿಗಳ ಪೈಕಿ ಪಾಪವೆಸಗಿದವರ ವಿಧಿಯು ಅಲ್ಲಾಹನ ಇಚ್ಚೆಗೆ ಒಳಪಟ್ಟಿದೆ. ಅವನು ಅವರನ್ನು ಶಿಕ್ಷಿಸಬಹುದು ಅಥವಾ ಅವರನ್ನು ಕ್ಷಮಿಸಬಹುದು. ಶಿಕ್ಷೆಗೆ ಒಳಗಾದವರು ಶಿಕ್ಷೆಯ ನಂತರ ಸ್ವರ್ಗಕ್ಕೆ ಹೋಗುತ್ತಾರೆ.
Attribution
Categories
Share hadeeth
Sharing options · 0 Total shares

