“ಸಂಬಂಧಿಕರು ಸಂಬಂಧ ಜೋಡಿಸಿದರೆ ಮಾತ್ರ ಸಂಬಂಧ ಜೋಡಿಸುವವನು ಕುಟುಂಬ ಸಂಬಂಧವನ್ನು ಕಾಪಾಡುವವನಲ್ಲ. ಬದಲಿಗೆ, ಸಂಬಂಧಿಕರು ಸಂಬಂಧವನ್ನು ಕಡಿದಾಗ ಅವರೊಡನೆ ಸಂಬಂಧ ಜೋಡಿಸುವವನೇ ಕುಟುಂಬ ಸಂಬಂಧವನ್ನು ಕಾಪಾಡುವವನು.”
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸಂಬಂಧಿಕರು ಸಂಬಂಧ ಜೋಡಿಸಿದರೆ ಮಾತ್ರ ಸಂಬಂಧ ಜೋಡಿಸುವವನು ಕುಟುಂಬ ಸಂಬಂಧವನ್ನು ಕಾಪಾಡುವವನಲ್ಲ. ಬದಲಿಗೆ, ಸಂಬಂಧಿಕರು ಸಂಬಂಧವನ್ನು ಕಡಿದಾಗ ಅವರೊಡನೆ ಸಂಬಂಧ ಜೋಡಿಸುವವನೇ…

