ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅ…

