ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮುಆದ್ ಬಿನ್ ಜಬಲ್ರನ್ನು ಯಮನ್ಗೆ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾ…

