Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 2.
Search the Hadeeth Encyclopedia
Smart instant results tolerate minor spelling mistakes, with every filter in one place.
ಉಪವಾಸಗಳು
ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು ನೀಡಿದ್ದಾನೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು…
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ನಾನು ಒಂದು ಈದ್‌ನಲ್ಲಿ ಪಾಲ್ಗೊಂಡಿದ್ದೆ. ಅವರು ಹೇಳಿದರು: 'ಇವೆರಡು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉಪವಾಸ ಆಚರಿಸುವುದನ್ನು ನಿಷೇಧಿಸಿದ ದಿನಗಳಾಗಿವೆ: ನಿಮ್ಮ ಉಪವಾಸವನ್ನು ಕೊನೆಗೊಳಿಸುವ ದಿನ ಮತ್ತು ನೀವು ನಿಮ್ಮ ಬಲಿಮೃಗದಿಂದ ತಿನ್ನುವ ದಿನ
ಇಬ್ನ್ ಅಝ್‌ಹರ್‌ರ ವಿಮೋಚಿತ ಗುಲಾಮ ಅಬೂ ಉಬೈದ್ ರಿಂದ ವರದಿ. "ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ನಾನು ಒಂದು ಈದ್‌ನಲ್ಲಿ ಪಾಲ್ಗೊಂಡಿದ್ದೆ. ಅವರು ಹೇಳಿದರು: 'ಇವೆರಡು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉಪವಾಸ ಆಚರಿಸುವುದನ್ನು ನಿಷೇಧಿಸಿದ ದಿನಗಳಾಗಿವೆ:…
ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್…
ನೀವು ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಲೈಲತುಲ್ ಖದ್ರ್ ಅನ್ನು ಹುಡುಕಿರಿ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತ…
ನಿಮ್ಮ ಕನಸುಗಳೆಲ್ಲವೂ ಕೊನೆಯ ಏಳರಲ್ಲಿ ಒಗ್ಗೂಡುತ್ತಿರುವುದನ್ನು ನಾನು ಕಾಣುತ್ತಿದ್ದೇನೆ. ಆದ್ದರಿಂದ ಯಾರಾದರೂ ಲೈಲತುಲ್ ಖದ್ರ್ ಅನ್ನು ಹುಡುಕುತ್ತಿದ್ದರೆ, ಅವರು ಅದನ್ನು ಕೊನೆಯ ಏಳರಲ್ಲಿ ಹುಡುಕಲಿ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಕೆಲವರಿಗೆ ಲೈಲತುಲ್ ಖದ್ರ್ ಕೊನೆಯ ಏಳು ರಾತ್ರಿಗಳಲ್ಲಿ ಎಂದು ಕನಸಿನಲ್ಲಿ ತೋರಿಸಲಾಯಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕನ…
ನೀವು ಅದನ್ನು (ಚಂದ್ರನನ್ನು) ಕಂಡರೆ ಉಪವಾಸವನ್ನು ಪ್ರಾರಂಭಿಸಿರಿ, ಮತ್ತು ನೀವು ಅದನ್ನು ಕಂಡರೆ ಉಪವಾಸವನ್ನು ನಿಲ್ಲಿಸಿರಿ. ಮೋಡಗಳ ಕಾರಣ ನಿಮಗೆ ಅದನ್ನು ಕಾಣಲಾಗದಿದ್ದರೆ ಮೂವತ್ತು ದಿನಗಳನ್ನು ಪೂರ್ಣಗೊಳಿಸಿರಿ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅದನ್ನು (ಚಂದ್ರನನ್ನು) ಕಂಡರೆ ಉಪವಾಸವನ್ನು ಪ್ರಾರಂಭಿಸಿರಿ, ಮತ್ತು ನೀವು ಅದನ್ನು ಕಂಡರೆ ಉಪವಾಸವನ್ನು ನಿಲ್ಲಿಸಿರ…
(ರಮದಾನ್ ತಿಂಗಳ ಕೊನೆಯ) ಹತ್ತು ದಿನಗಳು ಪ್ರಾರಂಭವಾದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿಯನ್ನು ಜೀವಂತಗೊಳಿಸುತ್ತಿದ್ದರು, ತಮ್ಮ ಕುಟುಂಬವನ್ನು ಎಬ್ಬಿಸುತ್ತಿದ್ದರು, ಪರಿಶ್ರಮಪಡುತ್ತಿದ್ದರು ಮತ್ತು ತಮ್ಮ ಧೋತಿಯನ್ನು ಬಿಗಿಗೊಳಿಸುತ್ತಿದ್ದರು
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "(ರಮದಾನ್ ತಿಂಗಳ ಕೊನೆಯ) ಹತ್ತು ದಿನಗಳು ಪ್ರಾರಂಭವಾದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿಯನ್ನು ಜೀವಂತಗೊಳಿಸುತ್ತಿದ್ದರು, ತಮ್ಮ ಕುಟುಂಬವನ್ನು ಎಬ್ಬಿಸುತ್ತಿದ್ದರು, ಪರಿಶ್ರಮಪ…
ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪಾಡಲು ಅದು ಹೆಚ್ಚು ಪರಿಣಾಮಕಾರಿಯಾಗಿದೆ. ವಿವಾಹವಾಗುವ ಸಾಮರ್ಥ್ಯವಿಲ್ಲದವರು ಉಪವಾಸ ಆಚರಿಸಬೇಕು. ಏಕೆಂದರೆ, ಅದು ಅವನಿಗೆ ಗುರಾಣಿಯಾಗಿದೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆವು. ಆಗ ಅವರು ಹೇಳಿದರು: "ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪ…
ವರ್ಷವಿಡೀ ಉಪವಾಸ ಆಚರಿಸುವವನು ಉಪವಾಸ ಆಚರಿಸುವುದಿಲ್ಲ. ಪ್ರತಿ ತಿಂಗಳ ಮೂರು ದಿನಗಳಲ್ಲಿ ಉಪವಾಸ ಆಚರಿಸುವುದು ವರ್ಷವಿಡೀ ಉಪವಾಸ ಆಚರಿಸಿದಂತೆ
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನೀನು ವರ್ಷವಿಡೀ ಉಪವಾಸ ಆಚರಿಸುತ್ತಿರುವೆಯಾ ಮತ್ತು ರಾತ್ರಿಯಿಡೀ ನಮಾಝ್ ಮಾಡುತ್ತಿರುವೆಯಾ?" ನಾನು ಹೇಳಿದೆ: "ಹೌದು." ಅವರು ಹೇಳಿದರು: "ನೀನ…
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು. ಅವರು (ಜ…

