Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 3.
Search the Hadeeth Encyclopedia
Smart instant results tolerate minor spelling mistakes, with every filter in one place.
ಅಲ್ಲಾಹನ ಹೆಸರುಗಳು ಮತ್ತು ಅವುಗಳಿಗೆ ಸಂಬಂಧಿತ ನಿಯಮಗಳು
ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ ಶಾಖೆಯಾಗಿದೆ ಮತ್ತು ರಸ್ತೆಯಿಂದ ಅಡ್ಡಿಗಳನ್ನು ನಿವಾರಿಸುವುದು ಅತ್ಯಂತ ಕೆಳಗಿನ ಶಾಖೆಯಾಗಿದೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ…
ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದಂತೆ ಇಲ್ಲದಿದ್ದರೆ, ಅದು ಹೇಳಿದವನಿಗೆ ಮರಳುತ್ತದೆ
ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದ…
ಅವರು ಹೇಳಿದ ಆ ಮಾತು ಮಾತ್ರ ಸತ್ಯವಾಗಿದೆ. ಜಿನ್ನ್‌ಗಳು ಆ ಮಾತನ್ನು (ಆಕಾಶದಿಂದ) ಕಸಿದುಕೊಂಡು ಅವರ ಗೆಳೆಯರ (ಜ್ಯೋತಿಷಿಗಳ) ಕಿವಿಯಲ್ಲಿ ಕೋಳಿ ಕುಕ್ಕುವಂತೆ ಸದ್ದುಮಾಡುತ್ತಾ ಪಿಸುಗುಡುತ್ತಾರೆ. ಅವರು (ಜ್ಯೋತಿಷಿಗಳು) ಅದಕ್ಕೆ ನೂರಕ್ಕಿಂತಲೂ ಹೆಚ್ಚು ಸುಳ್ಳುಗಳನ್ನು ಬೆರೆಸುತ್ತಾರೆ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಜನರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜ್ಯೋತಿಷ್ಯರ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದರು: "ಅವರು ಏನೂ ಅಲ್ಲ." ಜನರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಕೆಲವೊಮ್ಮೆ ಅವರು ಹೇಳುವ ಮಾತುಗಳು ಸತ್ಯವಾಗುತ…
ಯಾರು ಅಮಾನತ್ (ವಿಶ್ವಾಸ, ನಂಬಿಕೆ) ನ ಮೇಲೆ ಆಣೆ ಮಾಡುತ್ತಾರೋ ಅವರು ನಮ್ಮವರಲ್ಲ
“ಯಾರ ನಾಲಗೆ ಮತ್ತು ಕೈಯಿಂದ ಇತರ ಮುಸಲ್ಮಾನರು ಸುರಕ್ಷಿತರೋ ಅವನೇ ಮುಸ್ಲಿಮ್. ಯಾರು ಅಲ್ಲಾಹು ನಿಷೇಧಿಸಿದ್ದನ್ನು ತೊರೆಯುತ್ತಾನೋ ಅವನೇ ಮುಹಾಜಿರ್
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ…
ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ…
ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ.…
ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ
ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ನಮ್ಮನ್ನು ಶಿಕ್ಷಿಸಲಾಗುವುದೇ?" ಅವರು ಉತ್ತರಿಸಿದರು: "ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿ…
ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್…
“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ
ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿ…
ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಇಬ್ನ್ ಜುದ್‌ಆನ್ ಕುಟುಂಬ ಸಂಬಂಧಗಳನ್ನು ಜೋಡಿಸುತ್ತಿದ್ದರು ಮತ್ತು ಬಡವರಿಗೆ ಅನ್ನದಾನ ಮಾಡುತ್ತಿದ್ದರು. ಅವರಿಗೆ ಅದು ಉಪಕರಿಸುತ್ತದೆಯೇ?" ಅವರು ಹೇಳಿದರು: “ಇಲ್ಲ, ಅವರಿಗೆ ಅದು ಉಪಕರಿಸು…

