Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 6.
Search the Hadeeth Encyclopedia
Smart instant results tolerate minor spelling mistakes, with every filter in one place.
ಅಕೀದಾ
ಇಸ್ಲಾಮ್ ಎಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಮತ್ತು ಕಅಬಾಲಯಕ್ಕೆ ತಲುಪುವ ಸಾಮರ್ಥ್ಯವಿದ್ದರೆ ಕಅಬಾಲಯಕ್ಕೆ ಹಜ್ಜ್ ನಿರ್ವಹಿಸುವುದು
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದು ದಿನ ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಕುಳಿತಿದ್ದೆವು. ಆಗ ಶುಭ್ರ ಬಿಳಿ ಬಣ್ಣದ ಬಟ್ಟೆ ಧರಿಸಿದ ಮತ್ತು ಕಡುಗಪ್ಪು ಕೂದಲನ್ನು ಹೊಂದಿದ್ದ ಒಬ್ಬ ವ್ಯಕ್ತಿ ಅಲ್ಲಿಗೆ ಬಂದರು. ಅವರಲ್ಲಿ…
ನಮ್ಮ ಈ ವಿಷಯದಲ್ಲಿ (ಧರ್ಮದಲ್ಲಿ) ಅದರಲ್ಲಿಲ್ಲದ ಒಂದನ್ನು ಯಾರಾದರೂ ಆವಿಷ್ಕರಿಸಿದರೆ, ಅದು ತಿರಸ್ಕೃತವಾಗಿದೆ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮ್ಮ ಈ ವಿಷಯದಲ್ಲಿ (ಧರ್ಮದಲ್ಲಿ) ಅದರಲ್ಲಿಲ್ಲದ ಒಂದನ್ನು ಯಾರಾದರೂ ಆವಿಷ್ಕರಿಸಿದರೆ, ಅದು ತಿರಸ್ಕೃತವಾಗಿದೆ." [ಬುಖಾರಿ ಮತ್ತು ಮುಸ್ಲಿಂ]. ಮುಸ್ಲಿಂರ ವರದಿಯಲ್ಲಿ…
ಓ ನನ್ನ ದಾಸರೇ! ನಾನು ಸ್ವಯಂ ನನ್ನ ಮೇಲೆ ಅನ್ಯಾಯವನ್ನು ನಿಷೇಧಿಸಿದ್ದೇನೆ. ಅದೇ ರೀತಿ ಅದನ್ನು ನಿಮಗೂ ನಿಷೇಧಿಸಿದ್ದೇನೆ. ಆದ್ದರಿಂದ ನೀವು ಪರಸ್ಪರ ಅನ್ಯಾಯ ಮಾಡಬೇಡಿ
ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸರ್ವಶಕ್ತನಾದ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ವರದಿ ಮಾಡುತ್ತಾ ಹೇಳುತ್ತಾರೆ: "ಓ ನನ್ನ ದಾಸರೇ! ನಾನು ಸ್ವಯಂ ನನ್ನ ಮೇಲೆ ಅನ್ಯಾಯವನ್ನು ನಿಷೇಧಿಸಿದ್ದೇನೆ. ಅದೇ ರೀತಿ ಅದನ್ನು ನಿಮಗೂ ನಿಷೇಧಿಸಿದ್ದೇ…
ಮಗೂ! ನಾನು ನಿನಗೆ ಕೆಲವು ವಚನಗಳನ್ನು ಕಲಿಸುತ್ತೇನೆ. ಅಲ್ಲಾಹನ ಸಂರಕ್ಷಣೆ ಮಾಡು, ಅವನು ನಿನ್ನ ಸಂರಕ್ಷಣೆ ಮಾಡುವನು. ಅಲ್ಲಾಹನ ಸಂರಕ್ಷಣೆ ಮಾಡು, ಆಗ ನೀನು ಅವನನ್ನು ನಿನ್ನ ಮುಂಭಾಗದಲ್ಲಿ ಕಾಣಬಹುದು. ನೀನು ಬೇಡುವುದಾದರೆ ಅಲ್ಲಾಹನಲ್ಲಿ ಬೇಡು. ನೀನು ಸಹಾಯ ಯಾಚಿಸುವುದಾದರೆ, ಅಲ್ಲಾಹನಲ್ಲಿ ಸಹಾಯ ಯಾಚಿಸು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಭಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಮಗೂ! ನಾನು ನಿನಗೆ ಕೆಲವು ವಚನಗಳನ್ನು ಕಲಿಸುತ್ತೇನೆ. ಅಲ್ಲಾಹನ ಸಂರಕ್ಷಣೆ…
ಅವನನ್ನು ಕೊಲ್ಲಬಾರದು. ನೀವೇನಾದರೂ ಅವನನ್ನು ಕೊಂದರೆ, ನೀವು ಅವನನ್ನು ಕೊಲ್ಲುವುದಕ್ಕೆ ಮೊದಲಿನ ನಿಮ್ಮ ಸ್ಥಾನದಲ್ಲಿ ಅವನು ಇರುತ್ತಾನೆ ಮತ್ತು ಅವನು ಆ ಮಾತನ್ನು ಹೇಳುವುದಕ್ಕೆ ಮೊದಲಿನ ಅವನ ಸ್ಥಾನದಲ್ಲಿ ನೀವು ಇರುತ್ತೀರಿ
ಮಿಕ್ದಾದ್ ಬಿನ್ ಅಮ್ರ್ ಕಿಂದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಸತ್ಯನಿಷೇಧಿಯನ್ನು ಎದುರುಗೊಂಡು ಅವನೊಂದಿಗೆ ಹೋರಾಡುವಾಗ ಅವನು ನನ್ನ ಒಂದು ಕೈಯನ್ನು ಖಡ್ಗದಿಂದ ಕಡಿದು ತುಂಡು ಮಾಡಿ, ನಂತರ ಒಂದು ಮರದಲ್ಲಿ…
ಖಂಡಿತವಾಗಿಯೂ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಲಿಕ (ಗೋಳಾಡುವ ಮಹಿಳೆ), ಹಾಲಿಕ (ತಲೆ ಬೋಳಿಸಿಕೊಳ್ಳುವ ಮಹಿಳೆ) ಮತ್ತು ಶಾಕ್ಕ (ಬಟ್ಟೆ ಹರಿದುಕೊಳ್ಳುವ ಮಹಿಳೆ) ರಿಂದ ಮುಕ್ತರಾಗಿದ್ದರು
ಅಬೂ ಬುರ್ದ ಬಿನ್ ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಬೂ ಮೂಸಾ ತೀವ್ರ ನೋವಿನಿಂದ ಬಳಲುತ್ತಿದ್ದರು. ಅವರ ತಲೆಯು ಅವರ ಕುಟುಂಬದ ಮಹಿಳೆಯೊಬ್ಬರ ಮಡಿಲಿನಲ್ಲಿದ್ದ ಸ್ಥಿತಿಯಲ್ಲಿ ಅವರು ಪ್ರಜ್ಞಾಹೀನರಾಗಿದ್ದರು. ಆಕೆಗೆ ಯಾವುದೇ ರೀತಿಯಲ್ಲಿ ಉತ್ತರ ನೀಡಲು ಅವರಿಗೆ ಸಾಧ್ಯವಾಗಲಿಲ್ಲ. ಪ್ರಜ್…
ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಪ್ರಿಯವಾಗಿರುವುದು ಅದರ ಮಸೀದಿಗಳಾಗಿವೆ, ಮತ್ತು ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಅಪ್ರಿಯವಾಗಿರುವುದು ಅದರ ಮಾರುಕಟ್ಟೆಗಳಾಗಿವೆ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತ…
ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವ…
ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ
ಅಬೂ ಬರ್ಝ ಅಸ್ಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆ…
ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖೈಬರ್ ಯುದ್ಧದ ದಿನ ಹೇಳಿದರು: "ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು."…
ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ,…

