ನನ್ನ ಮಿತ್ರರ ಮೇಲೆ ದ್ವೇಷ ತೋರುವವನು ಯಾರೋ ಅವನ ವಿರುದ್ಧ ನಾನು ಯುದ್ಧವನ್ನು ಘೋಷಿಸಿದ್ದೇನೆ. ನಾನು ನನ್ನ ದಾಸನಿಗೆ ಕಡ್ಡಾಯಗೊಳಿಸಿದ ಕರ್ಮಗಳ ಮೂಲಕವಲ್ಲದೆ ನಾನು ಇಷ್ಟಪಡುವ ಇತರ ಯಾವುದರ ಮೂಲಕವೂ ಅವನು ನನಗೆ ಹತ್ತಿರವಾಗುವುದಿಲ್ಲ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಹೇಳಿದನು: ನನ್ನ ಮಿತ್ರರ ಮೇಲೆ ದ್ವೇಷ ತೋರುವವನು ಯಾರೋ ಅವನ ವಿರುದ್ಧ ನಾನು ಯುದ್ಧವನ್ನು ಘೋಷಿಸಿದ್ದೇನೆ. ನಾನು ನನ್ನ ದಾಸನಿಗೆ ಕಡ್ಡ…

